ಬೆಂಗಳೂರಿನ ಜಯನಗರದ ನಾಗನೂರು ಶ್ರೀ ಶಿವಬಸವ ಸ್ವಾಮೀಜಿ ಕಲ್ಯಾಣ ಕೇಂದ್ರದ ನವೀಕೃತ ‘ಗುರುಭವನ’ ಇಂದು ಪೂಜ್ಯರ ಹಾಗೂ ಅತಿಥಿ ಮಹೋದಯರ ಸಮ್ಮುಖದಲ್ಲಿ ಲೋಕಾರ್ಪಣೆ ಗೊಂಡಿತು.
ನಾಗನೂರು ಶ್ರೀ ರುದ್ರಾಕ್ಷಿ ಮಠದ ವತಿಯಿಂದ ಬೆಂಗಳೂರಿನ ಜಯನಗರದಲ್ಲಿ ನಿರ್ಮಿಸಲಾದ ನಾಗನೂರು ಶ್ರೀ ಶಿವಬಸವ ಸ್ವಾಮೀಜಿ ಕಲ್ಯಾಣ ಕೇಂದ್ರದ ನವೀಕೃತ ‘ಗುರುಭವನ’ ಉದ್ಘಾಟನಾ ಸಮಾರಂಭ ಇಂದು ಬೆಂಗಳೂರಿನಲ್ಲಿ ಜರುಗಿತು.
ಎಡೆಯೂರು ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯಲ್ಲಿ ಹಾಗೂ ನಾಗನೂರು ಶ್ರೀ ರುದ್ರಾಕ್ಷಿಮಠದ ಪೂಜ್ಯ ಶ್ರೀ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳ ನೇತೃತ್ವದಲ್ಲಿ ಉದ್ಘಾಟನೆಗೊಂಡ ಈ ಗುರುಭವನದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸಚಿವೆ, ಶಾಸಕಿ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್, ಬೈಲಹೊಂಗಲ ಶಾಸಕರಾದ ಶ್ರೀ ಮಹಾಂತೇಶ ಕೌಜಲಗಿ, ಚನ್ನಮ್ಮನ ಕಿತ್ತೂರು ಶಾಸಕರಾದ ಶ್ರೀ ಬಾಬಾಸಾಹೇಬ ಪಾಟೀಲ, ಪ್ರಮುಖರಾದ ಶ್ರೀ ಮಹಾಂತೇಶ ಬಿರಾದಾರ ಹಾಗೂ ಕಲ್ಯಾಣ ಕೇಂದ್ರದ ಕಾರ್ಯದರ್ಶಿಗಳಾದ ಶ್ರೀ ಶಂಭು ಹಿರೇಮಠ ಸೇರಿದಂತೆ ಹಲವು ಗಣ್ಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

















